ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ 2ನೇ ಹಂತದ ಹಡಿಲು ಭೂಮಿ ಕೃಷಿ

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಳೆದ ಬಾರಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದ್ದು ಈ ಭಾರಿ “ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ” ಮೂಲಕ ಹಡಿಲು ಭೂಮಿ ಕೃಷಿ ಮಾಡುವ ಸಲುವಾಗಿ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಇಂದು ದಿನಾಂಕ 23-04-2022 ರಂದು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರು ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳಾದ ಡಾll. ಶಂಕರ್, ವಿವಿಧ ಸಂಘ ಸಂಸ್ಥೆಯ ಸದಸ್ಯರು, ಭೂ ಮಾಲಕರು, ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply