ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅತ್ಯಾಚಾರ ಸಂತ್ರಸ್ತೆ!

  • ಕೇರಳ :20 ವರ್ಷದ ಯುವಕನಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ಕೊಚ್ಚಿಯ ಖಾಸಗಿ ಆಸ್ಪತ್ರೆಯ ಶೌಚಾಲಯದಲ್ಲಿ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.

ಮಗುವಿಗೆ ಜನ್ಮ ನೀಡಿದ ಬಳಿಕ ಆಕೆ ಮಗುವಿನ ಭ್ರೂಣವನ್ನು ಶೌಚಾಲಯದಲ್ಲಿ ಫ್ಲಶ್ ಮಾಡಿದ್ದಾಳೆ. ಆಕೆ ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಳು. ಜನ್ಮ ನೀಡಿದ ಬಳಿಕ ಸ್ಕ್ಯಾನಿಂಗ್ ಕೋಣೆಗೆ ಮರಳಿದ್ದಳು.

ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗಿ, ವೈದ್ಯರಿಗಾಗಿ ಕಾಯುತ್ತಿರುವಾಗ ಅಪ್ರಾಪ್ತೆ ತೀವ್ರ ನೋವನ್ನು ಅನುಭವಿಸಿ, ಶೌಚಾಲಯಕ್ಕೆ ಹೋದಾಗ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದಳು. ಇನ್ನೊಬ್ಬ ರೋಗಿ ಶೌಚಾಲಯ ದಲ್ಲಿರುವ ಭ್ರೂಣವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ, ವಯನಾಡ್ ಮೂಲದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 
 
 
 
 
 
 
 
 
 
 

Leave a Reply