ಹೆಸಕುತ್ತೂರು : ಕ್ಷಯರೋಗ ಮಾಹಿತಿ ಯಕ್ಷಗಾನ

ಕೋಟ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ , ಕೊರ್ಗಿ ಇವರ ಅಯೋಜನೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ಉಪ್ಪುಂದ ಇವರಿಂದ ‘ಕ್ಷಯರೋಗದ ಆರೋಗ್ಯ ಮಾಹಿತಿ ಬಗ್ಗೆ ಯಕ್ಷಗಾನ ಪ್ರದರ್ಶನ’ವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರು ಇಲ್ಲಿ ಇತ್ತೀಚಿಗೆ ನಡೆಯಿತು.
ಕ್ಷಯರೋಗದ ಸ್ವರೂಪ, ಗುಣಲಕ್ಷಣಗಳು, ಅದು ಹರಡುವ ರೀತಿ, ಅದರ ಚಿಕಿತ್ಸಾ ಕ್ರಮ, ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆ, ಕ್ಷಯರೋಗ ನಿರ್ಮೂಲನೆಗೆ ಸಂಬAಧಿಸಿದAತೆ ಸರಕಾರದಿಂದ ಕೈಗೊಂಡ ಕ್ರಮಗಳ ಕುರಿತು ಯಕ್ಷಗಾನದ ಮೂಲಕ ಪರಿಣಾಮಕಾರಿಯಾಗಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ, ಹೆಸಕುತ್ತೂರು ಇಲ್ಲಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಸ್ಥಳೀಯ ಅಂಗನವಾಡಿಯ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರ , ಕೊರ್ಗಿ ಇಲ್ಲಿನ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕ ಅಶೋಕ ತೆಕ್ಕಟ್ಟೆ ನಿರೂಪಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply