ಪ. ಜಾತಿ ಪ. ವರ್ಗದವರಿಗೆ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಏಪ್ರಿಲ್ 30 : ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಇದನ್ನು ಅರ್ಹ ಫಲಾನುಭವಿಗಳಿಗೆ ನಿಗದಿಪಡಿಸಲು ಕಾಲವಧಿಯೊಳಗೆ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರ ಪ್ರಸ್ತುತ ಸಾಲಿನಲ್ಲಿ ಆಯವ್ಯಯ ಮೊತ್ತದಲ್ಲಿ ಪ. ಜಾತಿ, ಪ. ಪಂಗಡದ ಜನಸಂಖ್ಯೆ ಆಧಾರದ ಮೇಲೆ ಶೇ. 24.10 ರಷ್ಟು ಅನುದಾನವನ್ನು ಮೀಸಲಿಟ್ಟು, ಕಾಲೋನಿಗಳ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಜೊತೆಗೆ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಆರ್ಥಿಕ ಸಹಾಯವನ್ನು ಕಲ್ಪಿಸಲು ಮುಂದಾಗಿದ್ದು ಸಮರ್ಪಕ ಅನುಷ್ಠಾನವಾಗಬೇಕು ಎಂದರು. ಜಿಲ್ಲೆಯಲ್ಲಿನ ಪ.ಜಾತಿ ಹಾಗೂ ಪ. ಪಂಗಡದವರ ನಿವೇಶನ ರಹಿತ, ವಸತಿ ರಹಿತರ ಪಟ್ಟಿಯನ್ನು ಮಾಡಿ ಅದಕ್ಕನುಗುಣವಾಗಿ ಲಭ್ಯವಿರುವ ಅನುದಾನವನ್ನು ಬಳಕೆ ಮಾಡಿ ಸೌಲಭ್ಯಗಳನ್ನು ಕಲ್ಪಿಸಬೇಕು. 
ರಾಜೀವ್ ಗಾಂಧಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು ಕೆಲವೊಂದು ಷರತ್ತಿನಿಂದಾಗಿ ಸಮರ್ಪಕ ಅನುಷ್ಠಾನವಾಗುತ್ತಿಲ್ಲದ ಹಿನ್ನಲೆ ಇಲಾಖೆಯ ವತಿಯಿಂದಲೇ ನೇರವಾಗಿ ಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು. ಪೌರ ಕಾರ್ಮಿಕರ ಅಭಿವೃದ್ಧಿಯ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದ ಅವರು ಜಿಲ್ಲೆಯಲ್ಲಿ 368 ಪೌರ ಕಾರ್ಮಿಕರ ಹುದ್ದೆಗಳಿದ್ದು ಅದರಲ್ಲಿ 130 ಖಾಯಂ ಇದ್ದರೆ , 164 ಜನ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. 
ಇವರುಗಳನ್ನು ಖಾಯಂಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲು ಸೂಚನೆ ನೀಡಿದರು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯು ಪ. ಜಾತಿ ಹಾಗೂ ಪ. ಪಂಗಡದ ರೈತರುಗಳ ಅಂಕಿ-ಸ೦ಖ್ಯೆಗಳನ್ನು ಕ್ರೂಢಿಕರಿಸುವ ಜೊತೆಗೆ ಸಣ್ಣ- ಅತಿ ಸಣ್ಣ ರೈತರುಗಳ ಮಾಹಿತಿ ಹೊಂದಿ ಅವರ ಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಸರ್ಕಾರದಿಂದ ಪಡೆದು ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು. ಸಮುದಾಯದವರು ಹೆಚ್ಚಿನ ಸಹಕಾರ ಸಂಘಗಗಳನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಡಬೇಕು, ಹೆಚ್ಚು ಜನರು ಸಹಕಾರ ಸಂಘದ ಸದಸ್ಯರಾಗಲು ಷೇರು ಬಂಡವಾಳವನ್ನು ಒದಗಿಸಬೇಕು, ಪ್ರತಿಯೊಬ್ಬ ಸದಸ್ಯರು ಯಶಸ್ವಿನಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಹಾಗೆ ಕ್ರಮ ವಹಿಸಬೇಕು ಎಂದರು.
ಪೌರ ಕಾರ್ಮಿಕರ ಅಭಿವೃದ್ಧಿಯ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದ ಅವರು ಜಿಲ್ಲೆಯಲ್ಲಿ 368 ಪೌರ ಕಾರ್ಮಿಕರ ಹುದ್ದೆಗಳಿದ್ದು ಅದರಲ್ಲಿ 130 ಖಾಯಂ ಇದ್ದರೆ , 164 ಜನ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರುಗಳನ್ನು ಖಾಯಂಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲು ಸೂಚನೆ ನೀಡಿದರು. ರಸ್ತೆ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಕೇರಿಗಳ ನಕ್ಷೆಯನ್ನು ಸಿದ್ಧಪಡಿಸಿದಲ್ಲಿ ಪ್ರಾಶಸ್ತ್ಯಕ್ಕೆ  ಗುಣವಾಗಿ ಕೇರಿಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತದೆ ಎಂದರು.
ಹೊಸಬರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಬಜೆಟ್ ನಲ್ಲಿ ಆಳ ಸಮುದ್ರ ಮೀನುಗಾರಿಕೆ, 100 ಹೊಸ್ ಬೋಟ್ಗಳನ್ನು ಖರೀದಿಸಲು, ಮೀನು ಮಾರಾಟ ಮಾಡಲು ಅನುಕೂಲವಾಗುಂತೆ ಮಹಿಳೆಯರಿಗೆ 100 ದ್ವಿ ಚಕ್ರ ವಾಹನವನ್ನು ಖರೀದಿಸಲು ಆರ್ಥಿಕ ಸೌಲಭ್ಯ ಕಲ್ಪಿಸಲಾಗಿದೆ ಎಂದರು.ವಾರಾಹಿ ಯೋಜನೆಗೆ ಬಿಡುಗಡೆ ಮಾಡಲಾಗಿರುವ ಒಟ್ಟು ಅನುದಾನದಲ್ಲಿ ಶೇ. 24.10 ರಷ್ಟು ಹಣವನ್ನು ಪ.ಜಾತಿ, ಪ.ಪಂಗಡದವರ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಡಬೇಕು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳು ಯೋಜನೆಯ ಲಾಭವು ಶೀಘ್ರದಲ್ಲಿಯೇ ಪಡೆಯುವಂತಾಗಲಿ ಎಂದರು.

ಕೊರಗ ಸಮುದಾಯದವರ ಆರೋಗ್ಯ ತಪಾಸಣೆ ಕಾರ್ಯವು ಆಗಿಂದ್ದಾಗೆ ಕೈ ಗೊಳ್ಳಬೇಕು, ಆಯುಷ್ಮಾನ್ ಆರೋಗ್ಯ ಕರ್ನಾಟಕದ ಯೋಜನೆ ಅಡಿ ತೀವ್ರ ತರಹದ ಕಾಯಿಲೆ ಹೊಂದಿದವರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಸರಿ ಪಡಿಸಬೇಕು ಎಂದರು. ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿರವರ ಆರೋಗ್ಯ ತಪಾಸಣೆ ಕಾರ್ಯವು ಉತ್ತಮವಾಗಿ ನಡೆಯುವುದರ ಜೊತೆಗೆ ಅವರ ಕುಟುಂಬ ವರ್ಗದವರಿಗೂ ಆರೋಗ್ಯ ವಿಮಾ ಸೌಲಭ್ಯ ಒದಗಿಸಲಾಗಿದೆ ಇದನ್ನು ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಕೆ, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ, ರಾಜ್ಯ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ನಿರ್ದೇಶಕಿ ಊರ್ಮಿಳಾ, ಡಾ. ಬಾಬು ಜಗಜ್ಜೀವನ್ ರಾವ್ ಸಂಶೋಧನಾ ಸಂಸ್ಥೆಯ ನಿರ್ದೇಶಕ ಅರುಣ್ ಫುಟಾರ್ಡೋ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply