ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ

ಕೋಟ: ನಾಲ್ವಡಿ ಕೃಷ್ಣರಾಜ ಒಡೆಯರ ಬದುಕು ತೆರೆದ ಪುಸ್ತಕದಂತೆ ಅವರ ಯೋಚನೆ/ಯೋಜನೆ ದೂರದಾಯಿತ್ವ ಉಳ್ಳದ್ದು ಕೃಷ್ಣರಾಜಸಾಗರದ ಅಣೆಕಟ್ಟಿಗೆ ತಮ್ಮ ಮನೆಯ ಚಿನ್ನಾಭರಣ ನೀಡಿರುವುದು ಅವರ ಸೇವೆಯ ಸ್ವರೂಪ ತಿಳಿಯುತ್ತದೆ ಎಂದು ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ಪ್ರೇಮಾನಂದ ನುಡಿದರು. ಅವರು ವಿವೇಕ ಬಾಲಕಿಯರ ಪ್ರೌಢಶಾಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ನಾಲ್ವಡಿ ಕೃಷ್ಣರಾಜ ಒಡೆಯರ ಗುಣಗಾನ ಮಾಡಿದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ, ಗುಂಡ್ಮಿ ಹಾಗೂ ಕೋಟ ಹೋಬಳಿಯ ಅಧ್ಯಕ್ಷರಾದ ಅಚ್ಯುತ ಪೂಜಾರಿ ಉಪಸ್ಥಿತರಿದ್ದರು. ವಿವೇಕ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗದೀಶ ಹೊಳ್ಳ ಸ್ವಾಗತಿಸಿದರು. ಸಮಾಜ ವಿಜ್ಞಾನ ಶಿಕ್ಷಕ ನರೇಂದ್ರ ಕುಮಾರ್ ವಂದಿಸಿ ನಿರೂಪಿಸಿದರು.

 
 
 
 
 
 
 
 
 
 
 

Leave a Reply