ಕೃಷಿ ಮತ್ತು ಹೈನುಗಾರಿಕಾ ಕ್ಷೇತ್ರಕ್ಕೆ ಸಹಕಾರಿ ರಂಗ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ- ಜಿ. ತಿಮ್ಮ ಪೂಜಾರಿ

ಕೋಟ: ಕೃಷಿ ಪತ್ತಿನ ಸಹಕಾರಿ ಸಂಘವಾಗಿ ಕೃಷಿ ಹಾಗೂ ಹೈನುಗಾರಿಕಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದೆ ಎಂದು ಕೋಟ ಸಹಕಾರಿ ವ್ಯವಸಾಯ ಸಂಘ ಇದರ ಅಧ್ಯಕ್ಷ ಜಿ ತಿಮ್ಮ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ಪಶುವೈದಕೀಯ ಸೇವಾ ಇಲಾಖೆ ಹಾಗೂ ಕೋಟ ಸಹಕಾರಿ ವ್ಯವಸಾಯಕ ಸಂಘ ಸಂಯುಕ್ತ ಆಶ್ರಯದಲ್ಲಿ 2021-22ನೇ ಸಾಲಿನ  ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿಯಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಆಧುನಿಕ ಪಶುಪಾಲನಾ ಚಟುವಟಿಕೆಗಳ ಬಗ್ಗೆ ರೈತರಿಗೆ ಒಂದು ದಿನದ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಕಳೆದ ಬಾರಿ ನಡೆದ ಗೋ ಮೇಳ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿದೆ ಅದೇ ರೀತಿ ರೈತ ಸಮುದಾಯದ ಹಿತ ಕಾಯಲು ಸಹಕಾರಿ ಕ್ಷೇತ್ರ ಮುಂಚೂಣಿಗೆ ನಿಲ್ಲುತ್ತದೆ.
ರೈತರು ಬೆಳೆದ ಬೆಳೆಗಳಿಗೆ ಕಾಲಕ್ಕೆ ತಕ್ಕಂತೆ ಸಮರ್ಪಕ ದರ ಸಿಗಬೇಕು ಅದಕ್ಕಾಗಿ ವಿವಿಧ ಇಲಾಖಾಧಿಕಾರಿಗಳು ಮೇಲಾಧಿಕಾರಿಗಳ ಗಮನ ಸೆಳೆಯಬೇಕು ಆ ಮೂಲಕ ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಶಿವ ಕುಮಾರ್,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್,ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ರಾಜೀವ ದೇವಾಡಿಗ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ,ಸಂಘದ ನಿರ್ದೇಶಕರು,ಉಪಸ್ಥಿತರಿದ್ದರು .ಪಸುಪಾಲನಾ ಇಲಾಖೆ ಉಡುಪಿ ಇದರ ಉಪನಿರ್ದೇಶಕ ಕೆ.ಶಂಕರ ಶೆಟ್ಟಿ ಪ್ರಾಸ್ತಾವನೆ ಸಲ್ಲಿಸಿದರು.ಬ್ರಹ್ಮಾವರ ತಾಲೂಕು ಪಶುಪಾಲನಾ ಇಲಾಖೆಯ ಆಡಳಿತ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.ಕಾರ್ಯಕ್ರಮವನ್ನು ಪಶುವೈದ್ಯಾಧಿಕಾರಿ ಡಾ.ಉದಯ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.ಕೋಟ ಸರಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಟಿ.ಮಂಜುನಾಥ ಗಿಳಿಯಾರು ಸಹಕರಿಸಿದರು.

 
 
 
 
 
 
 
 
 
 
 

Leave a Reply