ಕೋಟ ಪದವಿ ಕಾಲೇಜಿನಲ್ಲಿ ಉದ್ಯಮ ಶೀಲ ತರಬೇತಿ ಕಾರ್ಯಗಾರ

ಕೋಟ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಮತ್ತು ಕೋಟ ಪಡುಕೆರೆಯ ಲ.ಸೋ.ಬಂ.ಸ.ಪ್ರ.ದ. ಕಾಲೇಜಿನ ಉದ್ಯೋಗ ಮಾಹಿತಿ ಕೋಶದ ಸಹಭಾಗಿತ್ವದಲ್ಲಿ ಒಂದು ದಿನದ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. 

ಈಕಾರ್ಯಗಾರವನ್ನು ಮಂಗಳೂರಿನ ಕೌಶಲ್ಯಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ.ಬಾಳೇರಿ ಉದ್ಘಾಟಿಸಿ ಯುವಕರು ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಸ್ವ ಉದ್ಯೋಗಿಗಳಾಗ ಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಭಟ್, ಪ್ರಾಧ್ಯಾಪಕರು, ಎಮ್.ಬಿ.ಎ ಸ್ನಾತಕೋತ್ತರ ವಿಭಾಗ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ಮೃದು ಕೌಶಲ್ಯತೆ ಮತ್ತು ಉದ್ಯಮ ಸಾಹಸಿ ಗುಣಗಳನ್ನು ಹೇಗೆ ಬೆಳಸಿಕೊಳ್ಳಬೇಕೆಂಬ ¨ಗ್ಗೆ ತರಬೇತಿ ನೀಡಿದರು. 

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕು. ಪ್ರವೀಷ್ಯ, ಪ್ರಥ್ವಿರಾಜ್ ನಾಯಕ್ ಮತ್ತು ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಸುನೀತಾ.ವಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ಮುಖ್ಯಸ್ಥ ರಾಜಣ್ಣ .ಎಮ್ ನಿರೂಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ ನಾಯ್ಕ ಸ್ವಾಗತಿಸಿದರೆ ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುಬ್ರಹ್ಮಣ್ಯ.ಎ ವಂದಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಮತ್ತು ಕೋಟ ಪಡುಕೆರೆಯ ಲ.ಸೋ.ಬಂ.ಸ.ಪ್ರ.ದ. ಕಾಲೇಜಿನ ಉದ್ಯೋಗ ಮಾಹಿತಿ ಕೋಶದ ಸಹಭಾಗಿತ್ವದಲ್ಲಿ ಒಂದು ದಿನದ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ಕಾರ್ಯಗಾರವನ್ನು ಮಂಗಳೂರಿನ ಕೌಶಲ್ಯಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ.ಬಾಳೇರಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ, ಕು. ಪ್ರವೀಷ್ಯ, ಪ್ರಥ್ವಿರಾಜ್ ನಾಯಕ್ ಮತ್ತು ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಸುನೀತಾ.ವಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply