ಕೋವಿಡ್ 19 ನಿಯಮಗಳೊಂದಿಗೆ ಈಗಾಗಲೇ ನಿಗದಿ ಪಡಿಸಿದ ಧಾರ್ಮಿಕ ಕಾರ್ಯಕ್ರಮಗಳನ್ನು  ನಡೆಸಬಹುದು: ಸಚಿವ ಕೋಟ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಹಾಗೂ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ 19 ನಿಯಮ ಪಾಲಿಸಿವುದರೊಂದಿಗೆ ನಡೆಸಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ರಾತ್ರಿ, ಜಿಲ್ಲೆಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳಿಗೆ ನಿಷೇಧ ವಿಧಿಸಿ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವಂತೆ ದ.ಕ. ಜಿಲ್ಲಾಡಳಿತ ಆದೇಶ ನೀಡಿತ್ತು. ಜತೆಗೆ 144(3) ಅನ್ವಯ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾತ್ರೆ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ವಿಷಯದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿತ್ತು. ಈ ನಿಟ್ಟಿನಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದು, ಜಿಲ್ಲಾಧಿಕಾರಿಯೊಂದಿಗೆ ಈ ಬಗ್ಗೆ ಮಾತನಾಡುವುದಾಗಿ ಮಾಹಿತಿ ನೀಡಿದ್ದಾರೆ.

ಸಚಿವರು, ಬಯಲು/ಮೈದಾನ ಪ್ರದೇಶದಲ್ಲಿ ಗರಿಷ್ಠ 500 ಜನಕ್ಕಿಂತ ಜಾಸ್ತಿ ಸೇರುವಂತಿಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ ಎಂದು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply