ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿಏಪ್ರಿಲ್ 3: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದರು. 
ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಸಭೆ ಬಳಿಕ ಪಕ್ಷ ಪ್ರಮುಖರೊಂದಿಗೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾl ಕೆ. ವಿದ್ಯಾಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

 

 

 
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಶಾಸಕರಾದ ಯಶಪಾಲ್ ಸುವರ್ಣ, ಸುರೇಶ ಶೆಟ್ಟಿ ಗುರ್ಮೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಇದ್ದರು.
 
 
 
 
 
 
 
 
 
 
 

Leave a Reply