ಸಮುದ್ರ ಮಧ್ಯದಲ್ಲಿ ಮೊಳಗಿದ ‘ಕೋಟಿ ಕಂಠ ಗಾಯನ’!

ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸಮುದ್ರ ಮಧ್ಯದಲ್ಲಿ ಮೀನುಗಾರರು ಮತ್ತು ವಿದ್ಯಾರ್ಥಿನಿಯರ ಸಹಿತ 5000 ಮಂದಿ ಭಾಗವಹಿಸಿ ಹೊಸ ದಾಖಲೆ ನಿರ್ಮಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರ ತವರು ಜಿಲ್ಲೆಯಲ್ಲಿ ನಡೆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಸಂಪನ್ನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿಇದರ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅರಬ್ಬಿ ಸಮುದ್ರದ ಮಧ್ಯದಲ್ಲಿ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಅತ್ಯಂತ ವೈಭವದಿಂದ ಯಶಸ್ವಿಯಾಗಿ ನಡೆಯಿತು.

ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸುಮಾರು 150 ಪರ್ಸೀನ್ ಬೋಟಿನ 4500 ಮಂದಿ ಮೀನುಗಾರರು ಹಾಗೂ ಡಾ ಜಿ ಶಂಕರ್ ಸರಕಾರಿ ಮಹಿಳೆಯರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು, ಸಂಗೀತ ಕಲಾವಿದರು ಹಾಗೂ ಮೀನುಗಾರ ಮುಖಂಡರ ಸಹಿತ 5, 000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದ್ರದ ಮಧ್ಯದಲ್ಲಿ ಕನ್ನಡ ಗೀತೆಗಳನ್ನು ಹಾಡುವ ಮೂಲಕ ಈ ಅಭಿಯಾನಕ್ಕೆ ಹೊಸ ಸಂಚಲನ ಸೃಷ್ಟಿಸಿ ಮೆರುಗು ನೀಡಿದರು.

ಸಮಾರಂಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀ ಎಂ. ಕೂರ್ಮಾ ರಾವ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ, ಮೀನುಗಾರ ಮುಖಂಡರಾದ ಶ್ರೀ ನಾಗರಾಜ ಸುವರ್ಣ, ರಮೇಶ್ ಕೋಟ್ಯಾನ್, ಸಾಧು ಸಾಲ್ಯಾನ್, ರಾಮಚಂದ್ರ ಕುಂದರ್, ಸುಭಾಷ್ ಮೆಂಡನ್, ಉದಯ ಕುಮಾರ್, ರಾಜೇಂದ್ರ ಸುವರ್ಣ, ಟೂರಿಸ್ಟ್ ಬೋಟಿನ ಮುಖ್ಯಸ್ಥರಾದ ಶ್ರೀ ಗಣೇಶ್ ಮಲ್ಪೆ, ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಮಾಲೀಕರಾದ ಶ್ರೀ ಸನತ್ ಸಾಲ್ಯಾನ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply