Janardhan Kodavoor/ Team KaravaliXpress
29.6 C
Udupi
Sunday, August 1, 2021

ಶಾಸಕ ರಘುಪತಿಭಟ್ ರವರ ಕೋರಿಕೆಯಂತೆ ಶ್ರೀಕೃಷ್ಣಮಠದ ಅಷ್ಟ ಮಠಾಧೀಶರಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ಹಸ್ತಾಂತರ 

ಉಡುಪಿ ಶ್ರೀಕೃಷ್ಣಮಠದ ಅಷ್ಟ ಮಠಾಧೀಶರಿಂದ ನಾಡಿನ ಜನತೆಗಾಗಿ, ಪ್ರಸ್ತುತ ಲೋಕಕಂಟಕವಾಗಿರುವ ಕೋವಿಡ್(19 ) ಕೊರೊನದ ಸಂದರ್ಭದಲ್ಲಿ ಅಥವಾ ಯಾವುದೇ ಪ್ರಾಣಕಂಟಕದ ಸಂದರ್ಭದಲ್ಲಿ ನ ರವಾಗಲಿ ಎಂದು ಸುಮಾರು ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ವಾಹನವನ್ನು ಅಷ್ಟಮಠಾಧೀಶರು ಉಡುಪಿ ಜಿಲ್ಲಾಡಳಿತಕ್ಕೆ ನೀಡಿದರು. 
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು,
ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಹಾಗೂ ಜಿಲ್ಲಾಧಿಕಾರಿ ಜಿ ಜಗದೀಶ್ ,ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಗದೀಶ್, ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಮಠದ ವ್ಯವಸ್ಥಾಪಕರಾದ ಗೋವಿಂದ್ರಾಜ್ ಮೊದಲಾದವರು ಉಪಸ್ಥಿತರಿದ್ದರು.
- Advertisement -

ಸಂಬಂಧಿತ ಸುದ್ದಿ

Leave a Reply

ಸುಪ್ರಭಾತ

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!