Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

“ಯಾವುದೇ ಯಶಸ್ಸಿನ ಹಿಂದೆ ಸಮರ್ಥ ನಾಯಕತ್ವದ ಹಿನ್ನಲೆ ಅತ್ಯವಶ್ಯಕ” – ಡಾ. ಕೃಷ್ಣ ಪ್ರಸಾದ್

ಉಡುಪಿಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಆವರಣದ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮಾರಕ ಭವನದ ‘ಭಾವಪ್ರಕಾಶ’ ಸಭಾಂಗಣದಲ್ಲಿ ಜೂನ್ 09, 2022 ರಂದು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜರುಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ಪ್ರಸಾದ್ ನೇತ್ರಾಲಯದ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೃಷ್ಣ ಪ್ರಸಾದ್‌ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಯಾವುದೇ ಯಶಸ್ಸಿನ ಹಿಂದೆ ಸಮರ್ಥ ನಾಯಕತ್ವದ ಹಿನ್ನಲೆ ಅತ್ಯವಶ್ಯಕ. ಒಬ್ಬ ಒಳ್ಳೆಯ ನಾಯಕನ ಮಾರ್ಗದರ್ಶನದಲ್ಲಿ ಧನಾತ್ಮಕ ಹಾಗೂ ರಚನಾತ್ಮಕ ಕಾರ್ಯಕ್ರಮಗಳ ಮುಖಾಂತರ ಗುರಿಯನ್ನು ತಲುಪಲು ಖಂಡಿತಾ ಸಾಧ್ಯ. ಅದೇ ರೀತಿ ನಮ್ಮ ವಿದ್ಯಾರ್ಥಿ ಸಂಘವು ರಚನಾತ್ಮಕವಾಗಿ ಒಳ್ಳೆಯ ಚಟುವಟಿಕೆಗಳನ್ನು ನಡೆಸುವಂತೆ ಕರೆ ನೀಡಿ ಸಮಿತಿಯ ಸದಸ್ಯರನ್ನು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ.ಯವರು ವಹಿಸಿಕೊಂಡರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ‘ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ತರಹದ ಜ್ಞಾನ ಹಾಗೂ ಅವಕಾಶಗಳನ್ನು ಸದುಪಯೋಗಿಸಿಕೊಂಡು ಯಶಸ್ಸನ್ನು ಸಾಧಿಸಬೇಕು ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕು’ ಎಂದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾದ ಡಾ. ವೀರ ಕುಮಾರ ಕೆ. ವಿದ್ಯಾರ್ಥಿ ಸಂಘದ ಸದಸ್ಯರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ೨೦೨೦-೨೧ರ ಶೈಕ್ಷಣಿಕ ವರ್ಷದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು ನಡೆಸಿದ ಅಂತಿಮ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸಹಾಯಕ ಸ್ನಾತಕೋತ್ತರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಚೇತ ಕುಮಾರಿ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ವಿನಾಯಕ್ ಜೊÊಶ್, ಕಾರ್ಯದರ್ಶಿಯಾದ ಕು. ಶ್ರೀನಿಧಿ ಶೆಟ್ಟಿ ಹಾಗೂ ವಿವಿಧ ಚಟುವಟಿಕೆಗಳ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ವಿನಾಯಕ್ ಜೊÊಶ್ ಸ್ವಾಗತಿಸಿ, ಕಾರ್ಯದರ್ಶಿ ಕು. ಶ್ರೀನಿಧಿ ಶೆಟ್ಟಿ ವಂದಿಸಿದರು. ನಾಲ್ಕನೇ ವರ್ಷದ ಬಿ.ಎ.ಎಮ್.ಎಸ್. ವಿದ್ಯಾರ್ಥಿನಿಯರಾದ ಕು. ನಾಸಿರಾ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ.ರವೀಂದ್ರ ಅಂಗಡಿ ಯವರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!