ಕುಂದಾಪುರ: ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್) ತಿಳಿಸಿದೆ.
ಪ್ರೆಷರ್ ಸ್ವಿಂಗ್ ಅಡ್ಸಾರ್ಬ್ ಷನ್ (ಪಿಎಸ್ಎ) ವೈದ್ಯಕೀಯ ಆಮ್ಲಜನಕ ಸ್ಥಾವರ ನಿರ್ಮಾಣದ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಜೂನ್ ಅಂತ್ಯ ಇಲ್ಲವೇ ಜುಲೈನಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ
ಈ ಘಟಕ ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದಿಸಲಿದ್ದು, ದಿನಕ್ಕೆ 100 ಬೃಹತ್ ಸಿಲಿಂಡರ್ ಗಳನ್ನು ತುಂಬುವ ಸಾಮರ್ಥ್ಯ ಹೊಂದಲಿದೆ. ಒಂದು ಬೃಹತ್ ಸಿಲಿಂಡರ್ ನಲ್ಲಿ 7,000 ಲೀಟರ್ ಆಮ್ಲಜನಕವನ್ನು ತುಂಬ ಬಹುದಾಗಿದೆ. ಆದ್ದರಿಂದ ಮುಂದಿನ ತಿಂಗಳಿನಿಂದ ತಾಲ್ಲೂಕಿನಲ್ಲಿ ಆಮ್ಲಜನಕ ಲಭ್ಯವಿರಲಿದೆ ಎನ್ನುವ ಮಾಹಿತಿ ಇದೆ.