ಹೊಳೆಗೆ ಸ್ನಾನಕ್ಕೆಂದು ಹೋರಟವರಿಬ್ಬರೂ ನೀರು ಪಾಲು –

ಹೊಳೆಗೆ ಸ್ನಾನಕ್ಕೆಂದು ನೀರಿಗಿಳಿದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣಾ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಇವರಿಬ್ಬರು ಸ್ನೇಹಿತರು. ಗುರುವಾರ ಮಧ್ಯಾಹ್ನದ ವೇಳೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಿದ್ದಾರೆ. ಈ ಸಂದರ್ಭ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಸುಮಂತ್ ಹಾಗೂ ಗಣೇಶ್ ಮುಳುಗುತ್ತಿರುವುದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾಗಿದ್ದಾರೆ. ಆದರೂ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply