ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಭಾಭವನ ಉದ್ಘಾಟನಾ ಸಮಾರಂಭ – ಶಾಸಕ ರಘುಪತಿ ಭಟ್ ಭಾಗಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ರಿ.) ಇದರ ಮೆಸ್ಕಾಂ ಕಾಲೋನಿ, ಕುಂಜಿಬೆಟ್ಟು ಇಲ್ಲಿ ನಿರ್ಮಿಸಲಾದ ಸಭಾಭವನ ಇಂದು ದಿನಾಂಕ 28-02-2022 ರಂದು ಉದ್ಘಾಟನೆಗೊಂಡಿತು. ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷರಾದ ಟಿ.ಆರ್ ರಾಮಕೃಷ್ಣಯ್ಯ ಮತ್ತು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಿ. ಕುಮಾರ ನಾಯಕ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಮಂಜುಳಾ, ಮಂಗಳೂರು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಮಿಶ್ರಾ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾದ ಮಹೇಶ್ ಕರ್ಜಗಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ( ಪ್ರಸರಣ) ನಿರ್ದೇಶಕರಾದ ಬಿ.ಆರ್. ಚಂದ್ರಶೇಖರಯ್ಯ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಹಣಕಾಸು) ನಿರ್ದೇಶಕರಾದ ಸಿದ್ದಲಿಂಗಪ್ಪ ತೇಲಿ, ಮೆಸ್ಕಾಂ ತಾಂತ್ರಿಕ ನಿರ್ದೇಶಕರಾದ ಡಿ. ಪದ್ಮಾವತಿ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply