ಕುರ್ಕಾಲು ಮಹಾಶಕ್ತಿಕೇಂದ್ರದಲ್ಲಿ ಮೋದೀಜಿ ಹೆಸರಲ್ಲಿ ಅರ್ಥಪೂರ್ಣ ಸೇವಾ ಚಟುವಟಿಕೆ

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ‌ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು‌ ಮೋದೀಜಿ ಸರಕಾರದ ರಾಜ್ಯ ಸರಕಾರದ ಹಾಗೂ ಕಾಪು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಶುಭಹಾರೈಸಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ, ಫಲಾನುಭವಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಸಾಧಕರ ಗೌರವಾರ್ಪಣಾ ಜಿಲ್ಲಾ ಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ ಕುರ್ಕಾಲು ಅಧ್ಯಕ್ಷತೆ ವಹಿಸಿದ್ದರು. ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪಕ್ಷದ ಪ್ರಮುಖರಾದ ಗಂಗಾಧರ ಸುವರ್ಣ, ಮಂಡ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ನವೀನ್ ಎಸ್ ಕೆ ಉಪಸ್ಥಿತರಿದ್ದರು.

ಅರ್ಥಪೂರ್ಣ ಕಾರ್ಯಕ್ರಮದಲ್ಲಿ 20 ಜನ ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ಸಾಧಕರಿಗೆ ಗೌರವಾರ್ಪಣೆ ಮಾಡಲಾಯಿತು. 9 ಜನ ಸಮಾಜದ ವಿವಿಧ ಕ್ಷೇತ್ರಗಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ಒಟ್ಟಿನಲ್ಲಿ ಮೋದೀಜಿ ಹೆಸರಲ್ಲಿ ಅರ್ಥಪೂರ್ಣ ಸೇವಾಚಟುವಟಿಕೆ ಕುರ್ಕಾಲು ಮಹಾಶಕ್ತಿಕೇಂದ್ರದಲ್ಲಿ ನಡೆಯಿತು.

 
 
 
 
 
 
 
 
 
 
 

Leave a Reply