ಕುತ್ಪಾಡಿ ನೂತನ ಅಂಗನವಾಡಿ ಉದ್ಘಾಟನೆ

ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ಈ  ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಿಪಾಯವಾಗಿ ಪ್ರಾಥಮಿಕ ಶಿಕ್ಷಣಕ್ಕೆ ಸಜ್ಜುಗೊಳ್ಳುವಲ್ಲಿ ಅಂಗನವಾಡಿ ಕೇಂದ್ರದ ಪಾತ್ರ ಮಹತ್ವದ್ದಾಗಿದ್ದು, ಪುಟಾಣಿ ಮಕ್ಕಳಿಗೆ ಪೌಷ್ಟಿಕಾಂಶಭರಿತ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀ ಕುಮಾರ್ ನಾಯ್ಕ್, ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಪ್ರವೀಣ್ ಮೆಂಡನ್, ಶ್ರೀಮತಿ ವೇದಾವತಿ ರವಿ ಸುವರ್ಣ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಸ್ಥಳ ದಾನಿಗಳಾದ ಶ್ರೀ ಗಂಗಾಧರ ಸಾಲ್ಯಾನ್, ಸ್ಥಳೀಯರಾದ ಶ್ರೀ ಭುವನ್ ಪಡುಕರೆ, ಅಂಗನವಾಡಿ ಕಾರ್ಯರ್ತೆಯರು, ಪೋಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply