ದಾವಣಗೆರೆ ಪತ್ರಕರ್ತನ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ಮಂಜೂರು

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ದಾವಣಗೆರೆಯ ಪತ್ರಕರ್ತ ಮುನೇಶ್ ಅವರ ಕುಟುಂಬಕ್ಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಸಂಜೆವಾಣಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಮುನೇಶ್ ಎಚ್ ಎನ್ ಸಾವಿನ ಬಳಿಕ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ದಾವಣಗೆರೆ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು
ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆಗಳು

 
 
 
 
 
 
 
 
 
 
 

Leave a Reply