ರಾಮನಗರ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ ದೇಣಿಗೆ ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ್

ಬೆಂಗಳೂರು: ರಾಮನಗರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿದ ಉನ್ನತ ಶಿಕ್ಷಣ ಸಚಿವ ಮತ್ತು ಉಸ್ತುವಾರಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ರಾಮನಗರ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ ದೇಣಿಗೆ ಚೆಕ್ ಅನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಮತ್ತಿಕೆರೆ ಜಯರಾಂ, ರಾಮನಗರ ಜಿಲ್ಲಾಧ್ಯಕ್ಷ ಸೂರ್ಯ ಪ್ರಕಾಶ್, ಕಾರ್ಯದರ್ಶಿ ಶಿವರಾಜು, ರಾಜ್ಯ ಸಮಿತಿ ಸದಸ್ಯ ಸಿದ್ದಲಿಂಗೇಗೌಡ ಮತ್ತಿತರರು ಹಾಜರಿದ್ದರು.

ಕೆಯುಡಬ್ಲ್ಯೂಜೆ ಜಿಲ್ಲಾ ಘಟಕದ ರಾಮನಗರ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉದಾರವಾಗಿ ದೇಣಿಗೆ ನೀಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಭಿನಂದನೆಗಳು

 
 
 
 
 
 
 
 
 
 
 

Leave a Reply