ಕೆಯುಡಬ್ಲ್ಯೂಜೆ ಮನವಿಗೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ

ಕಲಬುರಗಿ ಹಿರಿಯ ಪತ್ರಕರ್ತ ಗುಣಶೇಖರ್ ಅವರು ಕೋವಿಡ್ ಗೆ ಬಲಿಯಾಗಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಮನವಿ ಮೇರೆಗೆ ಅವರ ಕುಟುಂಬಕ್ಕೆ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ರೂ ಮಂಜೂರು ಮಾಡಿದ್ದರು.

ಗುಣಶೇಖರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಿದ ಆಗಿನ ಸಿಎಂ ಯಡಿಯೂರಪ್ಪ ಅವರಿಗೆ, ಹಣ ಬಿಡುಗಡೆ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. 

 
 
 
 
 
 
 
 
 
 
 

Leave a Reply