ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಮಾಧ್ಯಮ ಕಿಟ್ ನೀಡುವುದು, ಪ್ರಾದೇಶಿಕ ಪತ್ರಿಕೆಗಳಿಗೆ ಉತ್ತೇಜನ ಸೇರಿದಂತೆ ಎರಡು ಬೇಡಿಕೆ ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು. ಇನ್ನುಳಿದ ಬೇಡಿಕೆಗಳಿಗೆ ಪೂರಕ ಬಜೆಟ್ ನಲ್ಲಿ ಆದ್ಯತೆ ನೀಡಬೇಕು ಎಂದು ನಿಯೋಗ ಮನವಿ ಮಾಡಿತು. ಪತ್ರಕರ್ತರ ಕ್ಷೇಮ ನಿಧಿಗೆ ಕನಿಷ್ಠ 100 ಕೋಟಿ ರೂ ಮೀಸಲಿಡಬೇಕು ಎಂದು ಕಲಬುರಗಿಯಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನಿರ್ಣಯ ತೆಗೆದುಕೊಂಡಿದ್ದನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ನೆನಪಿಸಲಾಯಿತು.
ರಾಯಚೂರಿನ ಪತ್ರಕರ್ತನಿಗೆ ಪರಿಹಾರ ಮಂಜೂರು ಮಾಡಿದ ಸಿಎಂ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ರಾಯಚೂರು ಜಿಲ್ಲೆಯ ಲಿಂಗಸೂರು ಪತ್ರಕರ್ತ ನಾಗರಾಜ ಮಸ್ಕಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಪ್ಪತ್ತು ಸಾವಿರ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು ಮಾಡಿದ್ದಾರೆ. ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆಗಳು