‘ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ನ.7ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ ಪ್ರತೀ ಬೂತ್ ಮಟ್ಟದಿಂದ ಫಲಾನುಭವಿಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಅ.30ರಂದು ಹಿರಿಯಡ್ಕದ ಸ್ಕಂದ ಸಭಾಗೃಹದಲ್ಲಿ‌ ನಡೆದ ಬಿಜೆಪಿ ಪೆರ್ಡೂರು ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯ ಅಂಗವಾಗಿ ನಡೆಯುವ ಈ ಸಮಾವೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯಲಿದ್ದು ಮುಂಬರಲಿರುವ ಚುನಾವಣೆಗಳಿಗೆ ಶಕ್ತಿ ತುಂಬಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪೆರ್ಡೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ, ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ‌ರಾದ ವಿನಯ ಪೂಜಾರಿ ಹಾಗೂ ದಯಾನಂದ ಪೂಜಾರಿ, ಪೆರ್ಡೂರು ಮಹಾಶಕ್ತಿ ಕೇಂದ್ರದ ಉಸ್ತುವಾರಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪಕ್ಷದ ಪ್ರಮುಖರು ಹಾಗೂ ಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲ ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಬೂತ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply