ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ವೀಕ್ಷಣೆಗೆ ಅವಕಾಶ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಮತ್ತು ನಗರ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮತ್ತು ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ರವರ ನೇತೃತ್ವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಪ್ರದರ್ಶನವನ್ನು ಪಕ್ಷದ ಕಾರ್ಯಕರ್ತರಿಗಾಗಿ ಮಣಿಪಾಲದ ಕೆನರಾ ಮಾಲ್ ನಲ್ಲಿ ಆಯೋಜಿಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಸಕರಾದ ಕೆ.ರಘುಪತಿ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ, ಜಿಲ್ಲೆ ಮತ್ತು ನಗರ ಬಿಜೆಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದರು.

 
 
 
 
 
 
 
 
 
 
 

Leave a Reply