ಉಡುಪಿ: ದಿನಾಂಕ 25/08/2021 ಕೋವಿಡ್-19 ಲಸಿಕೆ ಲಭ್ಯತೆಯ ವಿವರ

 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ) ಬೆಳಿಗ್ಗೆ 9.30 ರಿಂದ ಅಪರಾಹ್ನ 12.00 ರವರೆಗೆ- ಕೋವ್ಯಾಕ್ಸಿನ್ 2ನೇ ಡೋಸ್ (80 ಲಭ್ಯ). ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 9.00 ರಿಂದ ಅಪರಾಹ್ನ 1.00 ರವರೆಗೆ-

ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

 

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply