Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ರಾಷ್ಟ್ರೀಯ ಲೋಕ್ ಅದಾಲತ್

ಉಡುಪಿ, ಜುಲೈ 8 (ಕವಾ) : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಆಗಸ್ಟ್ 13 ರಂದುರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಸದರಿ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ಮೋಟಾರು ವಾಹನ ಅಪಘಾತ ಪರಿಹಾರ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ ಪ್ರಕರಣ, ಕಾರ್ಮಿಕ ಹಾಗೂ ಗ್ರಾಹಕರ ವಿವಾದಗಳಿಗೆ ಸಂಬAಧಪಟ್ಟ ಪ್ರಕರಣ, ಭೂ ಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬoಧಪಟ್ಟ ಪ್ರಕರಣ, ವೇತನ ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬAಧಿಸಿದ ಪ್ರಕರಣ ಹಾಗೂ ಕಾನೂನಿನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಸದರಿ ಪ್ರಕರಣಗಳ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ.

ಕೋವಿಡ್ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಕಕ್ಷಿಗಾರರು ಆನ್‌ಲೈನ್, ವೀಡಿಯೋ ಕಾನ್ಫ್ರೆನ್ಸ್, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹಾಗೂ ಖುದ್ದಾಗಿ ಹಾಜರಾಗುವ ಮೂಲಕ ಮೆಗಾ ಲೋಕ್ ಅದಾಲತ್‌ನಲ್ಲಿ
ಭಾಗವಹಿಸಿ ವಿವಾದವನ್ನು ಬಗೆಹರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಅಥವಾ ದೂರವಾಣಿ ಸಂಖ್ಯೆ : 0820-2523355 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!