‘ಮಲಬಾರ್ ವಿಶ್ವರಂಗ ಪುರಸ್ಕಾರ 2022

ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಇದೇ ಬರುವ ಮಾ. 27ರಂದು 3:30 ಕ್ಕೆ ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2022 ‘ ಪ್ರಧಾನ ಮಾಡಲಾಗುವುದು.

ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳಾದ
ಕುಂದಾಪುರದ ಡಾ. ಪಾರ್ವತಿ ಜಿ. ಐತಾಳ (ನಾಟಕಕಾರರು ಹಾಗೂ ವಿಮರ್ಶಕರು), ಮುಂಬೈಯ ಡಾ| ಭರತ್ ಕುಮಾರ್ ಪೊಲಿಪು (ನಟ ಹಾಗೂ ನಿರ್ದೇಶಕರು ಹೊರ ರಾಜ್ಯ), ಉಡುಪಿಯ ಬಿ. ಪ್ರಭಾಕರ್ ಭಂಡಾರಿ (ಸಂಘಟಕರು ತುಳುರಂಗಭೂಮಿ) ಮಂಗಳೂರಿನ ಅರೆಹೊಳೆ ಸದಾಶಿವ ರಾವ್ (ಸಂಘಟಕರು ಕನ್ನಡ ರಂಗಭೂಮಿ), ಹಾವೇರಿಯ ಶಂಕರ ಶಿವಪ್ಪ ತುಮ್ಮಣ್ಣನವರ (ನಟ ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರಧಾನ ಮಾಡಲಾಗುವುದು .
ಸಮಾರಂಭದ ಸಭಾಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ , ಮುಖ್ಯಅತಿಥಿಗಳಾಗಿ ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಮಹಾಪ್ರಬಂಧಕ ಜಯಕರ ಶೆಟ್ಟಿ ಇಂದ್ರಾಳಿ , ಮಣಿಪಾಲ ಮಾಹೆಯ ಯೋಗ ವಿಭಾಗದ ಮುಖ್ಯಸ್ಥೆ ಡಾ. ಅನ್ನಪೂರ್ಣ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply