Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಸಕಾಲ ಸಪ್ತಾಹ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ಅರಿವು- ಸಕಾಲ ಯೋಜನೆಯ ಹೆಚ್ಚುವರಿ​ ಮಿಷನ್ ನಿರ್ದೇಶಕಿ ಡಾ. ಮಮತಾ

ಉಡುಪಿ: ಪ್ರತಿಯೊಬ್ಬ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು​ ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ​ ಉದ್ದೇಶದಿಂದ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಸಕಾಲ ಯೋಜನೆಯ ಹೆಚ್ಚುವರಿ​ ಮಿಷನ್ ನಿರ್ದೇಶಕಿ ಡಾ. ಬಿ.ಆರ್. ಮಮತಾ ತಿಳಿಸಿದರು.

ಅವರು ಇಂದು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆವೀಡಿಯೋ ಸಂವಾದ ನಡೆಸಿ ಮಾತನಾಡಿದರು. ನವೆಂಬರ್ 30 ರಿಂದ ಡಿಸೆಂಬರ್ 5 ರ ವರೆಗೆ ನಗರಾಭಿವೃದ್ಧಿ, ಕಂದಾಯ ಸಾರಿಗೆ, ನಾಗರಿಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ಹಾಗೂ ಡಿಸೆಂಬರ್ 7 ರಿಂದ ಡಿಸೆಂಬರ್ 11 ರ ವರೆಗೆ ಗ್ರಾಮೀಣ ಅಭಿವೃದ್ಧಿ​  ಇಲಾಖೆಯಲ್ಲಿ ಸಪ್ತಾಹವನ್ನು ಆಚರಿಸಲಾಗುವುದು ಎಂದರು.

ಸಾರ್ವಜನಿಕರಿಗೆ ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಕೋರಿಕೆಯ ಅರ್ಜಿಗಳನ್ನು ಕಾನೂನಿನ ವ್ಯಾಪ್ತಿಯೊಳಗೆಪರಿಹರಿಸಬೇಕು. ತಪ್ಪಿದ್ದಲ್ಲಿ ಸಂ​ಬಂಧಪಟ್ಟ ಅಧಿಕಾರಿಗಳು ಹೊಣೆಗಾರರಾಗಬೇಕಾಗುತ್ತದೆ. ಸಕಾಲ ಯೋಜನೆಯಡಿ​ ​ಸಾರ್ವಜನಿಕರಿಗೆ ಸರಳವಾಗಿ ವಿಳಂಬವಿಲ್ಲದೆ ತಮ್ಮ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿದೆ ಎಂದರು.
ಸರ್ಕಾರದ ಸೇವೆಗಳನ್ನು ವಿಳಂಬವಿಲ್ಲದೆ, ಕಾಲಮಿತಿಯೊಳಗೆ ನೀಡುವ ಮಹತ್ವಾಕಾಂಕ್ಷೆಯೊAದಿಗೆ ಕರ್ನಾಟಕ ನಾಗರಿಕ​ ಸೇವೆಗಳ ಖಾತರಿ ಅಧಿನಿಯಮ 2012 ರಲ್ಲಿ ಜಾರಿಗೆ ತರಲಾಯಿತು. ಸಕಾಲ ಯೋಜನೆಯಡಿ ಒಟ್ಟು 98 ಇಲಾಖೆಗಳಲ್ಲಿ​ 1020 ಕ್ಕೂ ಹೆಚ್ಚಿನ ನಾಗರಿಕ ಕೇಂದ್ರಿತ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ 22,88,81,652 ಅರ್ಜಿಗಳನ್ನು​ ಸ್ವೀಕರಿಸಿ 22,82,55,866 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.

ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಗಳು ಮುಂದಾಗಬೇಕು​ ಎಂದ ಅವರು ಇವುಗಳ ಮೇಲುಸ್ತುವಾರಿ ತಂಡವನ್ನು ರಚಿಸಿ ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದರು.ಸಕಾಲದಡಿಯಲ್ಲಿ ಸ್ವೀಕೃತವಾದ ಅರ್ಜಿಗಳಿಗೆ 15 ಅಂಕಿಯ ಜಿ.ಎಸ್.ಇ ಸಂಖ್ಯೆಯನ್ನು ತಪ್ಪದೆ ನೀಡಬೇಕು. ಇದರಜೊತೆಗೆ ಅರ್ಜಿಯ ಪ್ರತಿಯೊಂದು ಹಂತದಲ್ಲಿಯೂ ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಸಂದೇಶವನ್ನು ರವಾನಿ ಸಬೇಕುಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ಇಲಾಖೆಯಲ್ಲಿ ಸಕಾಲ ಸೇವೆಗಳನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದ ಅವರುಯಾವುದೇ ತಾಂತ್ರಿಕ ದೋಷಗಳು ಕಂಡು​ಬಂದಲ್ಲಿ  ತಮ್ಮ ಮೇಲಿನ ಅಧಿಕಾರಿಗಳನ್ನು ಸಂಪರ್ಕಿಸಿ ನ್ಯೂನ್ಯತೆಯನ್ನು​  ​ಸರಿಪಡಿ​ ​ಕೊಳ್ಳಬೇಕು ಎಂದರು.​ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್​ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

​​


- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!