ಮಂಗಳೂರು ನಗರ ಉತ್ತರ ಯುವಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ಜಾಥಾ

ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ 8 ವರ್ಷಗಳ ಅಭೂತಪೂರ್ವ ಆಡಳಿತದ ಸಂಭ್ರಮಾಚರಣೆಯ ಅಂಗವಾಗಿ ಮಂಗಳೂರು ನಗರ ಉತ್ತರ ಯುವಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ಜಾಥಾ ನಡೆಯಿತು.

ಆದಿತ್ಯವಾರ ಬೆಳಿಗ್ಗೆ ಕಾವೂರು ಭಾಜಪಾ ಕಚೇರಿಯಿಂದ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದವರೆಗೆ ನಡೆದ ಬೈಕ್ ಜಾಥಾಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಉತ್ತರ ಯುವಮೋರ್ಚಾ ಅಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಮುಖಂಡರು,ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply