ಮಣೂರು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ ದಿನಕ್ಕೆ ಭವ್ಯ ಸ್ವಾಗತ

ಕೋಟ: ಇಲ್ಲಿನ ಕೋಟ ಮಣೂರು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭದ ದಿನದ ಅಂಗವಾಗಿ ವಿದ್ಯಾರ್ಥಿಗಳನ್ನು ಭವ್ಯ ಸ್ವಾಗತದ ಮೂಲಕ ಸ್ವಾಗತಿಸಲಾಯಿತು. ಶಾಲಾ ಮಹಾಪೋಷಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಪುಟಾಣಿಗೆ ಪುಷ್ಪ ಗುಚ್ಛ ಹಾಗೂ ಸಿಹಿತಿಂಡಿ ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು.

ಬ್ರಹ್ಮಾವರ ತಾಲೂಕಿನಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮನಾಗಿ ದಾಖಲೆಯ ವಿದ್ಯಾರ್ಥಿ ಸಮೂಹವನ್ನು ಸೃಷ್ಠಿಸಿಕೊಂಡು ಮುನ್ನೆಡೆಯುತ್ತಿರುವ ಈ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿದೆ ಸರಕಾರಿ ಶಾಲೆಯಾದರೂ ಸ್ಥಳೀಯ ಉದ್ಯಮಿ ಆನಂದ್ ಸಿ ಕುಂದರ್ ಸಾರಥ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಪಥದತ್ತ ಮುನ್ನುಗ್ಗುತ್ತಿದೆ.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಜಯಂತಿ,ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಜಯರಾಮ ಶೆಟ್ಟಿ,ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಫ್ರೌಡಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್,ಶಾಲಾಭಿವೃದ್ಧಿ ಸಮಿತಿ,ಶಿಕ್ಷಕ ವೃಂದ,ಪೋಷಕರ ವೃಂದ ,ಸ್ಥಳೀಯರು ಉಪಸ್ಥಿತರಿದ್ದರು. ಫ್ರೌಢಶಾಲಾ ಶಿಕ್ಷಕ ಶ್ರೀಧರ ಶಾಸ್ತಿç ಕಾರ್ಯಕ್ರಮ ನಿರೂಪಿಸಿದರು.
ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ ವಂದಿಸಿದರು.

ಇಲ್ಲಿನ ಕೋಟ ಮಣೂರು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭದ ದಿನದ ಅಂಗವಾಗಿ ಶಾಲಾ ಮಹಾಪೋಷಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಪುಟಾಣಿಗೆ ಪುಷ್ಪ ಗುಚ್ಛ ಹಾಗೂ ಸಿಹಿತಿಂಡಿ ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಜಯಂತಿ,ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಜಯರಾಮ ಶೆಟ್ಟಿ,ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply