ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡಿದ್ರು ಮಾಸ್ಕ್ ಕಡ್ಡಾಯ : ಹೈಕೋರ್ಟ್ ಆದೇಶ

ನವದೆಹಲಿ : ಮಾಸ್ಕ್ ಧರಿಸುವ ವಿಚಾರಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಸ್ವಂತ ವಾಹನದಲ್ಲಿ ಒಬ್ಬರೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೂ ಕೂಡ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ಆದೇಶ ನೀಡಿದೆ.

ಈ ಹಿಂದೆ ಸ್ವಂತ ಕಾರಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದ ನಾಲ್ವರಿಗೆ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ‌ ನಡೆಸಿದ ನ್ಯಾಯಾಲಯ, ನಾಲ್ವರ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಕಾರಿನ ಒಂದು ಸೀಟಿನಲ್ಲಿ ಕುಳಿತು ಪ್ರಯಾಣಿಸಿದರೂ ಕೂಡಾ ಅದು ಸಾರ್ವಜನಿಕ ಸ್ಥಳ ಎಂದೇ ಪರಿಗಣಿಸಲಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಜಸ್ಟೀಸ್ ಪ್ರತಿಭಾ ಎಂ ಸಿಂಗ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಸ್ವಂತ ವಾಹನದಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಮಧ್ಯಪ್ರವೇಶಿಸಲು ನಿರಾಕರಿಸಿದೆ.ಕೊರೋನ ಹರಡದಂತೆ ಮಾಸ್ಕ್ ಸುರಕ್ಷಾ ಕವಚವಾಗಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಸೋಂಕು ಇರುವ ಸಂದರ್ಭದಲ್ಲಿ ಖಾಸಗಿ ವಾಹನದಲ್ಲಿ ಒಬ್ಬರೇ ಕಾರಿನಲ್ಲಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೈಕೋರ್ಟ್ ಪೀಠ ತಿಳಿಸಿದೆ.

 
 
 
 
 
 
 
 
 
 
 

Leave a Reply