ಪತ್ರಕರ್ತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆಯ ಸಾಧ್ಯತೆ..!

ಪತ್ರಕರ್ತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಹೇಳಿದ್ದಾರೆ..!

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಸಂಘದ ತಾಲೂಕು ಘಟಕದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿದರು..!

ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ಪ್ಯಾಕೇಜ್ ಜಾರಿ ಮಾಡುವುದಾಗಿ ಅವರು ಭರವಸೆಯನ್ನು ನೀಡಿದ್ದಾರೆ…!

ಈ ಪ್ಯಾಕೇಜ್ ಜಾರಿಯಾದಲ್ಲಿ ಪತ್ರಕರ್ತರ ಬೇಡಿಕೆ ಈಡೇರಲಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗೆಗೆ ಮನವಿ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದೂ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ..!

~ ಕೆ.ಶಿವು.ಲಕ್ಕಣ್ಣವರ

 
 
 
 
 
 
 
 
 
 
 

Leave a Reply