ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದರು.

ಪತ್ರಕರ್ತರ ಮಾಸಾಶನವನ್ನು 10 ಸಾವಿರ ದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೇರಿದಂತೆ ಇನ್ನುಳಿದ ಬೇಡಿಕೆಯನ್ನು ಈಡೇರಿಸುವಂತೆ ಗಮನ ಸೆಳೆದರು. ಮುಂದೆ ಪರಿಗಣಿಸುವುದಾಗಿ ಸಿಎಂ ಪ್ರತಿಕ್ರಿಯಿ ಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಸ್ವಾಮಿ, ರಾಯ ಚೂರಿನ ವೆಂಕಟಸಿಂಗ್ ಮತ್ತಿತರರು ಇದ್ದರು.

ಪ್ರಭಾಕರ್ ಗೆ ಅಭಿನಂದನೆ:

ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ, ಪತ್ರಕರ್ತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಬೇಡಿಕೆ ಈಡೇರಿಸಲು ಶ್ರಮಿಸಿದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಅವರಿಗೂ ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

 
 
 
 
 
 
 
 
 
 
 

Leave a Reply