ಎಮ್.ಇ.ಐ. ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಯವರಿಗೆ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ

ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೇಟಿಯಾದರು. ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತೆ ಸೂಚಿಸಿದ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಾಮರಾಜ್ ಕಿದಿಯೂರು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply