ಮಹಾರಾಷ್ಟ್ರದಲ್ಲಿ ಮರುನಾಮಕರಣದ ಪರ್ವ ಆರಂಭ!

ಮಹಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕನಾಥ್ ಶಿಂಧೆ ಒಂದರ ಮೇಲೊಂದು ಹೊಸ ಹೊಸ ನಿರ್ಧಾರಗಳನ್ನು ತೆಗುದುಕೊಳ್ಳುತ್ತಿದ್ದಾರೆ. ಇದೀಗ ಏಕನಾಥ್ ಶಿಂದೆ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಾಬಾದ್​​ಗೆ ಛತ್ರಪತಿ ಸಂಭಾಜಿನಗರವೆಂದೂ, ಉಸ್ಮಾನಾಬಾದ್​​ಗೆ ಧರಶಿವ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಈ ಆದೇಶ ಹೊರಡಿಸಿತ್ತು. ಇದೀಗ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮರುನಾಮಕರಣ ನಿರ್ಧಾರ ಕೈಗೊಳ್ಳಲಾಗಿದೆ. ಠಾಕ್ರೆ ನೇತೃತ್ವದ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರ ಕಾನೂನಾತ್ಮಕವಾಗಿರಲಿಲ್ಲ, ಇದೀಗ ನಮ್ಮ ಸರ್ಕಾರ ತೆಗೆದುಕೊಂಡಿರುವ ಮರುನಾಮಕರಣ ನಿರ್ಧಾರ ಕಾನೂನಾತ್ಮಕವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದಿರುವ ಶಿಂದೆ, ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂದೆ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರಕ್ಕೆ ಪ್ರತಿಭಟನೆ ಬಿಸಿ ತಟ್ಟಿದೆ. ಮಹಾವಿಕಾಸ್ ಅಘಾಡಿ ಸಮಯದಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಇದೀಗ ಮತ್ತೊಮ್ಮೆ ಮರುಪರಿಶೀಲನೆ ಮಾಡಿದ್ದು ಸರಿಯಲ್ಲ ಎಂದು ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 
 
 
 
 
 
 
 
 
 
 

Leave a Reply