ಕಡೆ ನಟ್ಟಿಯಲ್ಲಿ ಮಿಲಾಗ್ರಿಸ್ ವಿದ್ಯಾರ್ಥಿಗಳು

ಸಮಾಜ ಸೇವೆ, ಸಾಮಾಜಿಕ ಕಾಳಜಿ ಹೊಂದಿರುವ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ರಾಷ್ತ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕಳೆದ ಬಾರಿಯಂತೆ ಈ ವರ್ಷವು ನೇಜಿ ನೇಡುವ ಮೂಲಕ ಉಡುಪಿಯ ಕಡೆಕಾರ್ ನಲ್ಲಿ ಕಡೆ ನಟ್ಟಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಕೇದಾರೋತ್ಥನ ಟ್ರಸ್ಟ್ ಮತ್ತು ಕೇದಾರೋತ್ಥನ ರೈತ ಉತ್ಪಾದಕರ ಕಂಪನಿ ಮೂಲಕ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ ಕಡೆ ನಟ್ಟಿ ಸಮಾರೋಪವು ಜುಲೈ 30 ರಂದು ನಡೆದಿದ್ದು ಮಿಲಾಗ್ರಿಸ್ ಕಾಲೇಜಿನ 70 ವಿದ್ಯಾರ್ಥಿಗಳು ನೇಜಿ ನೆಟ್ಟು ಕಾರ್ಯಕ್ರಮದ ಯಶಸ್ವಿಯಾಗೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಶಾಸಕರಾದ ಕೆ. ರಘುಪತಿ ಭಟ್ ವಿದ್ಯಾರ್ಥಿಗಳಿಗೆ ಕೃಷಿಯ ಮಹತ್ವ ತಿಳಿಸಿದರು ಹಾಗೂ ಈ ಕೃಷಿ ಆಂದೋಲನದಲ್ಲಿ ಪಾಲ್ಗೊಂಡ ಮಿಲಾಗ್ರಿಸ್ ಕಾಲೇಜು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಅಭಿನಂದನೆ ವ್ಯಕ್ತಪಡಿಸಿದರು.

ಈ ಕಾರ್ಯಕಮದಲ್ಲಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಬಾಬು ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಘವೇಂದ್ರ ಕಿಣಿ, ಶಿವಕುಮಾರ್, ಡಾಕ್ಟರ್ ಶಂಕರ್, ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಶ್ರೀಮತಿ ಅನುಪಮಾ ಜೋಗಿ ಮತ್ತು ಮೆಲ್ಸನ್ ಡಿಸೋಜ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply