ಮಹಿಳೆ ನಾಪತ್ತೆ

ಉಡುಪಿ, ಸೆಪ್ಟಂಬರ್ 14 (ಕವಾ) : ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ಹಾಲಂಬೇರು ಗುಡ್ಡೆಮನೆ ನಿವಾಸಿ ಸಾಕು (52) ಎಂಬ ಮಹಿಳೆಯು ಸೆಪ್ಟಂಬರ್ 8 ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply