ಮಲ್ಪೆ: ವ್ಯಕ್ತಿ ನಾಪತ್ತೆ

ಉಡುಪಿ: ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಮಲಯಾಳಂ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 

Leave a Reply