ಮಂಗಳೂರು ಮಡಗಾಂವ್ ಪ್ಯಾಸೆಂಜರ್ ರೈಲು ಪುನರಾರಂಭಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ

ಮಂಗಳೂರು ಮಡಗಾಂವ್ ಪ್ಯಾಸೆಂಜರ್ ರೈಲು ಸ್ಥಗಿತಗೊಂಡು 9 ತಿಂಗಳು ಕಳೆದಿದ್ದು ಕರಾವಳಿ ಕರ್ನಾಟಕ ಭಾಗದ ರೈತರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಸಣ್ಣ ವ್ಯಾಪಾರಿಗಳ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ.

ಸಾಮಾನ್ಯ ಜನರ ಹಿತದೃಷ್ಟಿಯಿಂದ ಈ ರೈಲನ್ನು ಅತಿ ಶೀಘ್ರದಲ್ಲಿ ಪುನರಾರಂಭಗೊಳಿಸಲು ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಜನವರಿ 18 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಜಿಲ್ಲಾ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು, ತಾಲೂಕು ಸಂಯೋಜಕರುಗಳಾದ ಜಗದೀಶ್ ಶೆಟ್ಟಿ, ಉದಯ ನಾಯ್ಕ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply