ಕೇಂದ್ರ ಹಾಗು ರಾಜ್ಯ ಸರಕಾರದಿಂದ ದೀಪಾವಳಿ ಬಂಪರ್ ಗಿಫ್ಟ್

ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್‌ ಮೇಲೆ 10 ರೂ ಹಾಗೂ ಪೆಟ್ರೋಲ್‌ ಮೇಲೆ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ.  ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.  ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ  ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್‌.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್‌ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್‌ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.

ರಾಜ್ಯ ಸರಕಾರದ ಈ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
 
 
 
 
 
 
 
 
 
 
 

Leave a Reply