ಮೋದಿಗೆ ಜೀವಕೊಟ್ಟ ದೇವರಿನ್ನಿಲ್ಲ

ಪ್ರಧಾನಿ ನರೇಂದ್ರ ಮೋದಿ ತಾಯಿ ಶತಾಯುಷಿ ಹೀರಾ ಬೇನ್ ನಿಧನ 

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

ಅಂದಹಾಗೇ ಅಹ್ಮದಾಬಾದ್ ನ ಆಸ್ಪತ್ರೆಗೆ ಅನಾರೋಗ್ಯದಿಂದಾಗಿ ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಯವರ ತಾಯಿ ಹೀರಾಬೇನ್ ದಾಖಲಾಗಿದ್ದರು. ತಮ್ಮ ತಾಯಿಯ ಆರೋಗ್ಯವನ್ನು ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದರು. 

ಅವರ ಆರೋಗ್ಯ ಸುಧಾರಿಸುತ್ತಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿಯೂ ವೈದ್ಯರು ಹೇಳಿದ್ದರು. ಈ ಬೆನ್ನಲ್ಲೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
 
 
 
 
 
 
 
 
 
 
 

Leave a Reply