ಪರಿಣಾಮಕಾರಿ ಲಾಕ್‌ಡೌನ್‌ನಿಂದ ಕೋವಿಡ್ ಸೋಂಕು ಇಳಿಕೆ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ​: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ​ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವುದರ ಜೊತೆಗೆ ಕೋವಿಡ್‌ನ ಮೂರನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ​ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತ​ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು​ ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್‌ಗಳನ್ನು​ ಸಂಪೂರ್ಣವಾಗಿ ಲಾಕ್‌ಡೌನ್ ಮುಂದುವರೆಸಬೇಕು ಎಂದರು.

ಕಳೆದ ಐದು ದಿನಗಳಿಂದ 50 ಕ್ಕೂ ಹೆಚ್ಚು ಪ್ರಕರಣಗಳು ಇರುವ ಗ್ರಾಮಪಂಚಾಯತ್‌ಗಳನ್ನು ಪೂರ್ಣ ಪ್ರಮಾಣದ ಲಾಕ್‌ಡೌನ್​ ಮಾಡಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆ ಪ್ರಸಕ್ತ 50 ಕ್ಕೂ ಪ್ರಕರಣಗಳಿರುವ ಬೈಂದೂರು​ ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, ನಲ್ಲೂರು,​ ಮರ್ಣೆ, ಹೆಬ್ರಿಯ ವರಂಗ, ಕುಂದಾಪುರದ ಗಂಗೊಳ್ಳಿ, ಆಲೂರು, ಕಾಪುವಿನ ಶಿರ್ವ, ಬೆಳ್ಳೆ, ಬ್ರಹ್ಮಾವರದ ಆವರ್ಸೆ, ಕೊಕ್ಕರ್ಣೆ ಗ್ರಾಮ​ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಬೇಕೆಂದರು.


ಜಿಲ್ಲೆಯಲ್ಲಿ 4085 ಸಕ್ರೀಯ ಪ್ರಕರಣಗಳಿದ್ದು, ಅವುಗಳಲ್ಲಿ 487 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 149 ಜನ​ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 3,449 ಜನರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ ಎಂದ ಅವರು ಜಿಲ್ಲೆಯಲ್ಲಿ ಒಟ್ಟು​ 20 ಬ್ಲಾö್ಯಕ್ ಫಂಗಸ್ ಪ್ರಕರಣಗಳು ಕಂಡುಬ0ದಿದ್ದು, ಅವುಗಳಲ್ಲಿ 6 ಪ್ರಕರಣಗಳು ಜಿಲ್ಲೆಯವರಾಗಿದ್ದು, 14 ಪ್ರಕರಣಗಳು​ ಹೊರ ಜಿಲ್ಲೆಯಿಂದ ಬಂದವರದ್ದಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ 4 ಪ್ರಕರಣಗಳು ಶಿಫ್ಟ್ ಆಗಿದ್ದು, ಅವರು ಅಲ್ಲಿ 2 ಜನ ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿ 6 ಜನರು ಗುಣಮುಖ ಹೊಂದಿದ್ದರೆ, 8 ಜನ ಚಿಕಿತ್ಸೆ​ ಪಡೆಯುತ್ತಿದ್ದಾರೆ.

3 ನೇ ಅಲೆ ಕೋವಿಡ್ ನಿರೋಧಕ ಲಸಿಕೆ ಪಡೆಯದ ಮಕ್ಕಳನ್ನು ಬಾದಿಸುವ ಸಾಧ್ಯತೆಗಳಿವೆ. ಮಾಧ್ಯಮಗಳಲ್ಲಿ ತಜ್ಞರು ಸಹ ಇದೇ​ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.​ ಒಂದೊಮ್ಮೆ ಹೆಚ್ಚು ಪ್ರಕರಣಗಳು ಕಂಡುಬ0ದಲ್ಲಿ ಅವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು​ ಅಭಿವೃದ್ಧಿಪಡಿಸಿಕೊಂಡು ಉತ್ತಮ ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಇರುವ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಈಗಾಗಲೇ ಸರ್ಕಾರ ಸ್ವಾಮ್ಯದ​ ಹಾಗೂ ಖಾಸಗಿ ಸಂಸ್ಥೆಗಳು ಸಹಾಯ ಹಸ್ತ ನೀಡಿದ್ದು, ಇವುಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು​ ಎಂದರು.

ಜನರು ಸಹ ತಮ್ಮ ದೈನಂದಿನ ಅಗತ್ಯತೆ ವಸ್ತುಗಳನ್ನು ಖರೀದಿ ಮಾಡಲು ಅವಶ್ಯವಿದ್ದಲ್ಲಿ ಮಾತ್ರ ಮನೆಯಿಂದ​ ಹೊರಬರಬೇಕು. ಅಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರೊಂದಿಗೆ ಕೋವಿಡ್​ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.​ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ​ ಸೀಲ್‌ಡೌನ್ ಮಾಡಬೇಕು ಎಂದ ಅವರು ಪ್ರತಿಯೊಂದು ಗ್ರಾಮ ಪಂಚಾಯತ್‌​ ​ಗಳಲ್ಲೂ ಕೋವಿಡ್ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ​ ಟ್ರೀಟ್‌ಮೆಂಟ್ ನಿಯಮವನ್ನು ತಪ್ಪದೇ ಮಾಡಬೇಕು ಎಂದರು.​ 

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕೋವಿಡ್ ನಿರೋಧಕ ಲಸಿಕೆಯನ್ನು ನೀಡಲು ಟೋಕನ್ ವಿತರಣೆಯನ್ನು​ ಪಾರದರ್ಶಕವಾಗಿ ಮಾಡುವುದರೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದ ಅವರು ಸಾಮಾನ್ಯವಾಗಿ ಗ್ರಾಮೀಣ ಭಾಗದಲ್ಲಿ​ ಕೋವಿಡ್ ಸೋಂಕು ಹಬ್ಬ ಹಾಗೂ ಮದುವೆ ಕಾರ್ಯಕ್ರಮಗಳಿಂದ ಹೆಚ್ಚು ಜನರಿಗೆ ಸೋಂಕು ಹರಡುತ್ತಿದೆ. ಇದಕ್ಕೆ ನಿರ್ಬಂಧ​ ಹೇರುವುದು ಸೂಕ್ತ ಎಂದರು.​ 

ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಕೊರೋನಾ ನಿರೋಧಕ ಚುಚ್ಚುಮದ್ದನ್ನು ಜಿಲ್ಲೆಯಲ್ಲಿ 2,75,064 ಜನರಿಗೆ​ ಒಂದನೇ ಡೋಸ್ ಲಸಿಕೆ ನೀಡಲಾಗಿದ್ದು, 87,360 ಜನರಿಗೆ ಎರಡನೇ ಲಸಿಕೆ ನೀಡುವುದರೊಂದಿಗೆ ಶೇಕಡ 20.37 ಆಗಿದೆ. ಇದು​ ರಾಜ್ಯದಲ್ಲಿಯೇ ಹೆಚ್ಚು ಚುಚ್ಚುಮದ್ದು ನೀಡಿರುವ ಜಿಲ್ಲೆಯಾಗಿದ್ದು, ರಾಜ್ಯದಿಂದ ಹೆಚ್ಚುವರಿ ಕೋವಿಡ್ ಲಸಿಕೆ ಸರಬರಾಜು​ ಮಾಡಿದ್ದಲ್ಲಿ ಅವುಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕಾಪು ತಾಲೂಕಿನ ಕೊತ್ತಲ್‌ಕಟ್ಟೆ ಹಾಗೂ ಭರತ್ ನಗರಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆ​ ಅವುಗಳನ್ನು ಕಂಟೈನ್‌ಮೆಟ್ ಝೋನ್‌ಗಳೆಂದು ಘೋಷಿಸುವುದರೊಂದಿಗೆ ಸೋಂಕು ಹರಡದಂತೆ ಕ್ರಮ ವಹಿಸಬೇಕು ಎಂದು​ ​ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ​ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮತ್ತಿತರರು ಉಪಸ್ಥಿತರಿದ್ದರು.​​
 
 
 
 
 
 
 
 
 
 
 

Leave a Reply