ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ

ಉಡುಪಿ: ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯ ಬಲಿದಾನ ದಿನದ ಅಂಗವಾಗಿ ಬುಧವಾರ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.

ಈ ವೇಳೆ ಅವರು ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಂದುಬೆಟ್ಟು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply