ನಗರಸಭೆಯಿಂದ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ಕಾರ್ಯಾಚರಣೆ

ಉಡುಪಿ ನಗರಸಭೆಯಿಂದ ದಿನಾಂಕ 05.11.2022 ರಂದು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ಕಾರ್ಯಾಚರಣೆ ಮಾಡಿದ್ದು, ಸುಮಾರು 45 ಕೆ.ಜಿ ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂಪಾಯಿ 10,200/- ದಂಡವನ್ನು ವಿಧಿಸಲಾಗಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‌ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಛೇರಿ ಸಂಕೀರ್ಣಗಳು, ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಸೂಚಿಸಿದ್ದು, ಬಳಕೆ ಮಾಡುವ ವ್ಯಾಪಾರಿಗಳಿಗೆ ದಂಡ ವಿಧಿಸಿ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು.

ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವ ಸಾರ್ವಜನಿಕರಿಗೂ ದಂಡ ವಿಧಿಸಿ ಕ್ರಮಕೈಗೊಳ್ಳಲಾಗುವುದು.

 
 
 
 
 
 
 
 
 
 
 

Leave a Reply