ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುನಿಯಾಲು ಆಯುರ್ವೇದ ಕಾಲೇಜು, ಮಣಿಪಾಲದಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯ ಕಾರ್ಯಕ್ರಮವು ಇತ್ತೀಚೆಗೆ ಕಾಲೇಜಿನ ಬುದ್ಧಾಯುರ್ವೇದ ಸಭಾಭವನದಲ್ಲಿ ಜರುಗಿತು.

ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯ ಅತಿಥಿಗಳು ಶ್ರೀ ಮನೋಹರ್ ಎಸ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರು, ಸಾಯಿರಾಧ ಗ್ರೂಪ್ಸ್ ಇವರು ಮಾತನಾಡಿ ವಿದ್ಯಾರ್ಥಿಗಳು ಧೈರ್ಯ ಇದ್ದರೆ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ ಹಾಗೂ ಪ್ರವಾಸಿ ತಾಣವಾದ ಕರಾವಳಿ ಪ್ರದೇಶದಲ್ಲಿ ಆಯುರ್ವೇದ ವೈದ್ಯರಿಗೆ ತಮ್ಮ ವೃತ್ತಿ ಜೀವನವನ್ನು ಸಾಧಿಸಲು ಅನೇಕ ಅವಕಾಶಗಳಿವೆ ಎಂದರು.

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ್ ಭಟ್ ಬೋಧಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪರಿಚಯವನ್ನು ಡಾ. ರಶ್ಮಿ ಕಲ್ಕೂರ ನೀಡಿದರು. ತದನಂತರ ಕಾಲೇಜಿನಲ್ಲಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರು ಡಾ. ಎಂ. ವಿಜಯಭಾನು ಶೆಟ್ಟಿ, ಟ್ರಸ್ಟಿಯಾದ ಹೇಮಲತಾ ವಿ. ಶೆಟ್ಟಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಆಶಿತಾ ನಿರೂಪಿಸಿದರು.

ಡಾ. ಅರ್ಚನಾ ಕಲ್ಲೂರಾಯ ಅವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಡಾ. ವಿದ್ಯಾಶ್ರೀ ಅವರು ವಂದನಾರ್ಪಣೆಯನ್ನು ಸಲ್ಲಿಸಿದರು.
ಸಭಾ ಕಾರ್ಯಕ್ರಮದ ನಂತರ ಮುನಿಯಾಲು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

 
 
 
 
 
 
 
 
 
 
 

Leave a Reply