ಫಾಜೀಲ್ ಮೃತ ದುರ್ದೈವಿ. ಫಾಜೀಲ್ ಮೇಲೆ ಅಪರಿಚಿತ ತಂಡದವರು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಮಂಗಳಪಾದೆ ನಿವಾಸಿ ಫಾಜೀಲ್ ಗಂಭೀರ ಗಾಯಗೊಂಡ ಫಾಜೀಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿ ಸುರತ್ಕಲ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ