ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರು ಫೈನಲ್

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಶಿವಶರಣರು ಪೋಸ್ಕೋ ಕಾಯ್ದೆಯಡಿ ಜೈಲಿ ಸೇರಿದ ಬಳಿಕ, ಮಠದ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಒತ್ತಡ ಹೆಚ್ಚಾಗಿತ್ತು. ಅಂತಿಮವಾಗಿ ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರನ್ನಾಗಿ ದಾವಣಗೆರೆಯ ವಿರಕ್ತ ಮಠದ ಬಸವಪ್ರಭುಶ್ರೀ ಹೆಸರನ್ನು ಅಂತಿಮ ಗೊಳಿಸಲಾಗಿದೆ.

ಮುರುಘಾ ಶ್ರೀಗಳ ವಿರುದುದ್ಧ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಎರಡು ದಿನಗಳ ಹಿಂದೆ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಕೂಡ ಮುರುಘಾ ಶ್ರೀ ವಿರುದ್ಧ ದಾಖಲಾಗಿತ್ತು.

ಈ ಹಿನ್ನಲೆಯಲ್ಲಿ ನಿನ್ನೆಷ್ಠೇ ಆಡಳಿತಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್ಐಎಂ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ ನಿವೃತ್ತ ನ್ಯಾಯಮೂರ್ತಿ ಎಸ್ ಬಿ ವಸ್ತ್ರದಮಠ್ ಅವರಿಗೆ ಮುರುಘಾ ಶ್ರೀ ಪವರ್ ಆಫ್ ಅಟಾರ್ನಿಯನ್ನು ಹಸ್ತಾಂತರಿಸಿದ್ದರು.

ಈ ನಡುವೆ ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷರ ಸಂಬಂಧ ಹಲವು ಮುಖಂಡರು ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರನ್ನು ಅಂತಿಮಗೊಳಿಸಿದ್ದಾರೆ. ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 

ಆದರೆ ಇವರ ನೇಮಕಕ್ಕೆ ವಿವಿಧ ಮಠಾಧೀಶರು, ಸಮಾಜದ ಮುಖಂಡರು ಅಪಸ್ವರ ಎತ್ತಿದ್ದಾರೆ. ಹೀಗಾಗಿ ಮತ್ತೆ ಯಾವ ದಿಕ್ಕಿನತ್ತ ಕೊಂಡೊಯ್ಯುತ್ತೋ ಎಂಬುದನ್ನು ಕಾದು ನೋಡಬೇಕಿದೆ.

 
 
 
 
 
 
 
 
 
 

Leave a Reply