ನದಿಗಳ ಸಂರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ

ಕಾವೇರಿ ದಕ್ಷಿಣ ಭಾರತದ ಪ್ರಮುಖ ನದಿಯಾಗಿದ್ದು ಕೋಟ್ಯಂತರ ಜನರ ಬದುಕಿಗೆ ಆಧಾರ. ಈ ನದಿಯ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದರು.

ಕುಶಾಲನಗರದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನದಿಯನ್ನು ತಾಯಿಯಂತೆ ಪೂಜ್ಯ ಭಾವನೆಯಿಂದ ಕಾಣಬೇಕು. ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ನದಿ ಹರಿಯುವ ಎಲ್ಲಾ ಪ್ರದೇಶಗಳಲ್ಲಿ ಅದನ್ನು ಸಂರಕ್ಷಿಸುವುದು ಪ್ರತಿಯೊರ್ವರ ಕರ್ತವ್ಯವಾಗಿದೆ ಎಂದು ಹೇಳಿದರು.

ಇನ್ನು ನದಿಗಳ ಕುರಿತು ಜಾಗೃತಿ, ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದರು. ಇನ್ನು ಈ ಸಂದರ್ಭದಲ್ಲಿ ಸ್ಥಳೀಯ ಮಾಧ್ಯಮ ಕೇಂದ್ರವೊಂದಕ್ಕೆ ಶ್ರೀಗಳು ಭೇಟಿ ನೀಡಿ ಪತ್ರಿಕೆ ಮಾಧ್ಯಮಗಳ ಬಗ್ಗೆ ಮಾತನಾಡಿ, ಸಮಾಜದಲ್ಲಿ ವ್ಯವಸ್ಥೆಗಳ ಬದಲಾವಣೆಗೆ ಪ್ರಮುಖ ಕೊಂಡಿಯಾಗಿ ಪತ್ರಿಕೆ, ಮಾಧ್ಯಮಗಳು ಕೆಲಸ ನಿರ್ವಹಿಸಬೇಕಾಗುತ್ತದೆ ಎಂದರು.

ಮಾಧ್ಯಮಗಳು ವಸ್ತುಸ್ಥಿತಿ, ನೈಜಾಂಶ ಜನರಿಗೆ ನೀಡುವ ಮೂಲಕ ಸಮಾಜದ ಏಳಿಗೆಯಲ್ಲಿ ಪ್ರತ್ಯೇಕ ಪಾತ್ರ ವಹಿಸುತ್ತದೆ ಎಂದರು.

 
 
 
 
 
 
 
 
 
 
 

Leave a Reply