ಮನ್ ಕೀ ಬಾತ್ ನಲ್ಲಿ ಮಿಂಚಿದ ಯುವ ಜೋಡಿಗೆ ನಮೋ ಎಂದ ಬಿಜೆಪಿಗರು🙏

ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿರುವ ನವ ದಂಪತಿ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ರವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಡುಪಿ ಅಜ್ಜರಕಾಡು ನಿವಾಸದಲ್ಲಿ ಭೇಟಿಯಾಗಿ ಆಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ, ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಫಲಾನುಭವಿಗಳ ಪ್ರಕೋಷ್ಠ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,

ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ನ್ಯಾಯವಾದಿ ಉಮೇಶ್ ಶೆಟ್ಟಿ, ಜಗದೀಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply