ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ನಿಧನ

ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84)  ಫೆ.1 ರಂದು ನಿಧನರಾದರು. ಪತ್ನಿ, ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ರಂಗಸ್ಥಳದಲ್ಲಿ 40 ವರ್ಷಗಳ ಕಾಲ  ತಿಟ್ಟು ಬೇಧವಿಲ್ಲದೇ  ಕಲಾಸೇವೆ ಮಾಡಿದ್ಡಿದರು. ನಾರಾಯಣ ಗಾಣಿಗರ ಕಲಾ ಸಾಧನೆಗೆ 2014ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ತನ್ನ 12ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟ ನಾರಾಯಣ ಗಾಣಿಗರು ಬಹುಬೇಗ ಪ್ರಸಿದ್ಧಿ ಹೊಂದಿದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಕುಂಡಾವು, ಕೂಡ್ಲು, ಸುರತ್ಕಲ್, ಇಡಗುಂಜಿ ಮೊದಲಾದ ಮೇಳಗಳಲ್ಲಿ ನಾಲ್ಕುವರೆ ದಶಕಗಳ ಕಾಲ ಕಲಾಸೇವೆಗೈದಿದ್ದಾರೆ.  ಹಾವ-ಭಾವ, ಒನಪು-ಒಯ್ಯಾರದ ಪ್ರಕಾಷ್ಠ ಪ್ರತಿಭೆ, ಶೃಂಗಾರ ಕರುಣಾ, ಭಕ್ತಿ ರಸಗಳಲ್ಲಿ ಇವರ ಅಭಿನಯ ಅಪ್ರತಿಮ. ಗಾಣಿಗರ ಮೋಹಿನಿ, ಶಿವೆ, ಸುಶೀಲೆ, ರೂಪರೇಖಾ, ಪ್ರಭಾವತಿ ಪಾತ್ರಗಳು ಇಂದಿಗೂ ಯಕ್ಷಗಾನ ಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ.

 
 
 
 
 
 
 
 
 
 
 

Leave a Reply