ತಮಿಳುನಾಡಿನಲ್ಲಿ ಅಣ್ಣಾಮಲೈ ಗೆ ಬಿಜೆಪಿ ಜೈ

ಚೆನ್ನೈ: ಬಿಜೆಪಿ ಸೇರ್ಪಡೆಗೊಂಡಿರುವ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಇದೀಗ ಮಹತ್ವದ ಹೊಣೆ ಗಾರಿಕೆ ನೀಡಲಾಗಿದೆ.


ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷ ರನ್ನಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇದೀಗ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿ ಸಿದಂತೆ ಅಧ್ಯಕ್ಷ ಎಲ್.ಮುರುಗನ್ ಮಾಹಿತಿ ನೀಡಿದ್ದಾರೆ.


ಆಗಸ್ಟ್ 25ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರನ್ ಅವರ ನೇತೃತ್ವದಲ್ಲಿ ಅವರು ಕಮಲ ಪಾಳ ಯಕ್ಕೆ ಸೇರ್ಪಡೆಯಾಗಿದ್ದರು. ಇದಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.

 
 
 
 
 
 
 

Leave a Reply